ಯಾವ ಮೋಹನ ಮುರಳಿ ಕರೆಯಿತು ದೂರ ತೀರಕೆ ನಿನ್ನನು
ಯಾವ ಬೃಂದಾವನವು ಸೆಳೆಯಿತು ನಿನ್ನ ಮಣ್ಣಿನ ಕಣ್ಣನು |ಪ|
ಯಾವ ಬೃಂದಾವನವು ಸೆಳೆಯಿತು ನಿನ್ನ ಮಣ್ಣಿನ ಕಣ್ಣನು |ಪ|
ಹೂವು ಹಾಸಿಗೆ ಚಂದ್ರ ಚಂದನ ಬಾಹುಬಂಧನ ಚುಂಬನ
ಬಯಕೆ ತೋಟದ ಬೇಲಿಯೊಳಗೆ ಕರಣಗಣದೀ ರಿಂಗಣ |೧|ಯಾವ|
ಬಯಕೆ ತೋಟದ ಬೇಲಿಯೊಳಗೆ ಕರಣಗಣದೀ ರಿಂಗಣ |೧|ಯಾವ|
ಸಪ್ತಸಾಗರದಾಚೆಯೆಲ್ಲೋ ಸುಪ್ತಸಾಗರ ಕಾದಿದೆ
ಮೊಳೆಯದಲೆಗಳ ಮೂಕ ಮರ್ಮರ ಇಂದು ಇಲ್ಲಿಗೂ ಹಾಯಿತೆ |೨|ಯಾವ|
ವಿವಶವಾಯಿತು ಪ್ರಾಣ ಹಾ! ಪರವಶವು ನಿನ್ನೀ ಚೇತನಮೊಳೆಯದಲೆಗಳ ಮೂಕ ಮರ್ಮರ ಇಂದು ಇಲ್ಲಿಗೂ ಹಾಯಿತೆ |೨|ಯಾವ|
ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತುಡಿವುದೇ ಜೀವನ |೩|ಯಾವ|
ಸಾಹಿತ್ಯ : ಗೋಪಾಲ ಕೃಷ್ಣ ಅಡಿಗ
ಸಂಗೀತ : ಮೈಸೂರು ಅನಂತಸ್ವಾಮಿ
No comments:
Post a Comment